Friday, 22 July 2016

ಜಿಲ್ಲೆಯ ಆಯ್ದ 76 ಗ್ರಾ.ಪಂ. ಗಳಲ್ಲಿ ಕಂದಾಯ ಸೇವೆಗಳು ಲಭ್ಯ


ಕೊಪ್ಪಳ ಜು. 22 (ಕರ್ನಾಟಕ ವಾರ್ತೆ): ಸರ್ಕಾರದ ಆದೇಶದನ್ವಯ ಗ್ರಾಮ ಪಂಚಾಯತಿಗಳ ಮುಖಾಂತರ ಪಹಣಿ ವಿತರಣೆಯೂ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ 40 ಬಗೆಯ ಸೇವೆಗಳನ್ನು ಒದಗಿಸಲು ಆಯ್ದ 76 ಗ್ರಾಮ ಪಂಚಾಯತಿಗಳಲ್ಲಿ ಬಾಪೂಜೀ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
     ಗ್ರಾಮ ಪಂಚಾಯತಿಗಳ ಮುಖಾಂತರ ಪಹಣಿ ವಿತರಿಸಲು ಸರ್ಕಾರ ಅನುಮೋದನೆ ನೀಡಿದ್ದು, ಜಿಲ್ಲೆಯ 76 ಗ್ರಾಮ ಪಂಚಾಯತಿಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡು, ಈ ಗ್ರಾಮ ಪಂಚಾಯತಿಗಳಲ್ಲಿ ಪಹಣಿ ವಿತರಣೆ ಸೇರಿದಂತೆ, ಕಂದಾಯ ಇಲಾಖೆಗೆ ಸಂಬಂಧಿಸಿದ 40 ಬಗೆಯ ಸೇವೆಗಳ ಅರ್ಜಿಗಳನ್ನು ಸ್ವೀಕರಿಸಲು ಬಾಪೂಜೀ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.  ಸಾರ್ವಜನಿಕರು ಇನ್ನು ಮುಂದೆ ಗ್ರಾಮ ಪಂಚಾಯತಿ ಮಟ್ಟದಲ್ಲಿಯೇ ಈ ಸೇವೆಗಳನ್ನು ಪಡೆಯಬಹುದಾಗಿದ್ದು, ನಾಡ ಕಚೇರಿ ಅಥವಾ ತಾಲೂಕು ಕಚೇರಿಗಳಿಗೆ ಹೋಗುವ ವ್ಯವಸ್ಥೆಯನ್ನು ಸರಳೀಕರಣಗೊಳಿಸಲಾಗಿದೆ.  ಸಾರ್ವಜನಿಕರು ಈ ವ್ಯವಸ್ಥೇಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment