Monday, 18 July 2016

ಅಪಿಯರಲ್ ಡಿಸೈನಿಂಗ್ ಕೋರ್ಸ್ (ಟೇಲರಿಂಗ್) ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ, ಜು.18 (ಕರ್ನಾಟಕ ವಾರ್ತೆ) : ಕೊಪ್ಪಳದ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಜಿಲ್ಲೆಯ ಯುವತಿಯರಿಗಾಗಿ ಅಪಿಯರಲ್ ಡಿಸೈನಿಂಗ್ ಕೋರ್ಸ್ (ಟೇಲರಿಂಗ್) ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು 30 ದಿನಗಳ ಅವಧಿಯದಾಗಿದ್ದು, ತರಬೇತಿ ವೇಳೆ ಉಚಿತ ಊಟ ಮತ್ತು ವಸತಿ ಕಲ್ಪಸಲಾಗುವುದು. ಅರ್ಜಿ ಸಲ್ಲಿಸುವವರು ಕೊಪ್ಪಳ ಜಿಲ್ಲೆಯವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷದೊಗಿರಬೇಕು ಹಾಗೂ ಕನಿಷ್ಠ 8 ನೇ ತರಗತಿ ಪಾಸಾಗಿರಬೇಕು.  ಅರ್ಜಿ ನಮೂನೆ ಪಡೆಯಲು ಹಾಗೂ ಭರ್ತಿ ಅರ್ಜಿ ಸಲ್ಲಿಸಲು ಜು.27 ಕೊನೆಯ ದಿನ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಜು.27 ರಂದು ಬೆಳಗ್ಗೆ 10.30 ಗಂಟೆಗೆ ಸಂದರ್ಶನ ನಡೆಸಲಾಗುವುದು. ಜು.28 ರಿಂದ ತರಬೇತಿ ಪ್ರಾರಂಭವಾಗಲಿದೆ.
ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂರವಾಣಿ ಸಂಖ್ಯೆ: 08539-231038 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Post a Comment