Wednesday, 20 July 2016

ಕುಕನೂರು ಐಟಿಐ : ಖಾಲಿ ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ, ಜು.20 (ಕರ್ನಾಟಕ ವಾರ್ತೆ) : ಕುಕನೂರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ವಿವಿಧ ವೃತ್ತಿಗಳಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸರಕಾರಿ/ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅರ್ಜಿ ಪಡೆದು ಜು.24 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕುಕನೂರು ದೂ. ಸಂ: 08534-230470 ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Post a Comment