Monday, 17 October 2016

ಅ. 18 ರಂದು ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ

ಕೊಪ್ಪಳ ಅ. 17 (ಕರ್ನಾಟಕ ವಾರ್ತೆ) : ಕೊಪ್ಪಳ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ ಅ. 18 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿದೆ.
     ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ವಹಿಸುವರು.  ಕಳೆದ ಆಗಸ್ಟ್ 24 ರಂದು ಜಿ.ಪಂ. ಸಾಮಾನ್ಯ ಸಭೆಯನ್ನು ಏರ್ಪಡಿಸಲಾಗಿತ್ತು.  ಆದರೆ ಅನಿವಾರ್ಯ ಕಾರಣಗಳಿಂದ ಸಭೆಯನ್ನು ಮುಂದೂಡಲಾಗಿತ್ತು.  ಇದೀಗ ಸಾಮಾನ್ಯ ಸಭೆ ಅ. 18 ರಂದು ನಡೆಸಲು ನಿಗದಿಪಡಿಸಲಾಗಿದೆ.  ಸಭೆಯಲ್ಲಿ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಹಾಗೂ ಜಿ.ಪಂ. ಅಧೀನ ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನ ಕುರಿತು ಚರ್ಚೆ ನಡೆಯಲಿದೆ ಎಂದು ಜಿ.ಪಂ. ಕಚೇರಿ ಪ್ರಕಟಣೆ ತಿಳಿಸಿದೆ.
Post a Comment