Tuesday, 18 October 2016

ಅ.20 ರಂದು ಕುಕನೂರು ಐಟಿಐ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

ಕೊಪ್ಪಳ, ಅ.18  (ಕರ್ನಾಟಕ ವಾರ್ತೆ) : ಐಟಿಸಿ ಮೈಸೂರು ಕಂಪೆನಿಯು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುಕನೂರಿನಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ  ಅ.20 ರಂದು ಬೆಳಗ್ಗೆ 10 ಗಂಟೆಗೆ ಐಟಿಐ ಪೂರ್ಣಗೊಳಿಸಿದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಕ್ಕಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಿದೆ.
      ಎರಡು ವರ್ಷದ ಐಟಿಐನ ಎನ್‍ಸಿವಿಟಿ ವೃತ್ತಿಯಲ್ಲಿ ಶೇ.60 ಅಂಕಗಳೊಂದಿಗೆ  ಉತ್ತೀರ್ಣರಾದ  18 ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳು, ಸಂಬಂಧಿಸಿದ ಮಾಕ್ರ್ಸ್ ಕಾರ್ಡ್ ಹಾಗೂ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿ ಹಾಗೂ ಪಾಸ್‍ಪೋರ್ಟ್ ಅಳತೆಯ ಫೋಟೋಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
     ಅಭ್ಯರ್ಥಿಗಳು ಸಂದರ್ಶನಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿ ಪಾಲ್ಗೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ: 9480715898 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಕುಕನೂರು ಐಟಿಐ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment