Tuesday, 18 October 2016

ಕುಕನೂರು : ವಾಜಪೇಯಿ ನಗರ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಅ. 21 ಕೊನೆಯ ದಿನ

ಕೊಪ್ಪಳ ಅ. 18 (ಕರ್ನಾಟಕ ವಾರ್ತೆ) : ಕುಕನೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆಯಡಿ 2016-17 ಹಾಗೂ 2017-18 ನೇ ಶ್ರೇಣಿಯಡಿ ಒಟ್ಟು 113 ಮನೆಗಳು ಮಂಜೂರಾಗಿದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅ. 21 ಕೊನೆಯ ದಿನವಾಗಿರುತ್ತದೆ.
      ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದಿಂದ ವಾಜಪೇಯಿ ನಗರ ವಸತಿ ಯೋಜನೆಯಡಿ ಕುಕನೂರು ಪಟ್ಟಣ ಪಂಚಾಯತಿಗೆ 2016-17 ಹಾಗೂ 2017-18 ನೇ ಸಾಲಿಗೆ ಪ.ಜಾತಿ-97, ಪ.ಪಂಗಡ-13, ಸಾಮಾನ್ಯ-03 ಸೇರಿದಂತೆ ಒಟ್ಟು 113 ಮನೆಗಳ ಮಂಜೂರಾತಿಗೆ ಗುರಿ ನಿಗದಿಪಡಿಸಲಾಗಿದೆ.  ಈ ಯೋಜನೆಗೆ ಅರ್ಜಿ ಸಲ್ಲಿಸಲು ಅ. 21 ಕೊನೆಯ ದಿನಾಂಕವಾಗಿದ್ದು, ಅರ್ಹರು ನಿಗದಿತ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗೆ ಕುಕನೂರು ಪಟ್ಟಣ ಪಂಚಾಯತಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment