Thursday, 20 October 2016

ಕೊಪ್ಪಳ : ಅ. 28 ರಂದು ತಾಲೂಕಾ ಪಂಚಾಯತಿ ತ್ರೈಮಾಸಿಕ ಕೆಡಿಪಿ ಸಭೆ

ಕೊಪ್ಪಳ ಅ. 20 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಾ ಪಂಚಾಯತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಅ. 28 ರಂದು ಬೆಳಿಗ್ಗೆ 10 ಗಂಟೆಗೆ ಅಳವಂಡಿಯ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
     ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ವಹಿಸುವರು.  ತಾಲೂಕು ಮಟ್ಟದ ಎಲ್ಲ ಅನುಷ್ಠಾನಾಧಿಕಾರಿಗಳು ಸೆಪ್ಟಂಬರ್ ಅಂತ್ಯದವರೆಗಿನ ಪ್ರಗತಿ ವರದಿಯೊಂದಿಗೆ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಕೊಪ್ಪಳ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
Post a Comment