Thursday, 6 October 2016

ಪ್ರವಾಸಿ ಟ್ಯಾಕ್ಸಿ ಯೋಜನೆ : ಫಲಾನುಭವಿಗಳ ಆಯ್ಕೆ ಪಟ್ಟಿ ಪ್ರಕಟ

ಕೊಪ್ಪಳ, ಅ.06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವರ್ಗದವರಿಗೆ ನೀಡಲಾಗುವ 2015-16 ನೇ ಸಾಲಿನ ಪ್ರವಾಸಿ ಟ್ಯಾಕ್ಸಿ ಯೋಜನೆಯ ಫಲಾನುಭವಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
    ಇಲಾಖೆಯಿಂದ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ರೂ.2 ಲಕ್ಷ ಸಹಾಯಧನ ಹಾಗೂ ಸಾಲ ಸೌಲಭ್ಯ ಒದಗಿಸಿ ಪ್ರವಾಸಿ ಟ್ಯಾಕ್ಸಿ ವಿತರಿಸಲಾಗುವುದು.  ಫಲಾನುಭವಿಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಲ್ಲಿ ಆಯ್ಕೆ ಮಾಡಲಾಗಿದೆ. ಆಯ್ಕೆ ಪಟ್ಟಿಯನ್ನು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಈ ಅಂತಿಮ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ/ ದೂರುಗಳಿದ್ದಲ್ಲಿ ಅ.21 ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬಹುದು.  ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment