Wednesday, 8 March 2017

ಮಾ.10 ರಂದು ಕೊಪ್ಪಳದಲ್ಲಿ ದಲಿತ ವಚನಕಾರರ ಜಯಂತಿ

ಕೊಪ್ಪಳ, ಮಾ.06 (ಕರ್ನಾಟಕ ವಾರ್ತೆ):  ಕೊಪ್ಪಳ ಜಿಲ್ಲಾಡಳಿತ ವತಿಯಿಂದ ದಲಿತ ವಚನಕಾರರ ಜಯಂತಿ ಸಮಾರಂಭ ಮಾ.10 ರಂದು ಬೆಳಿಗ್ಗೆ 9-00 ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
      ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಉದ್ಘಾಟನೆ ನೆರೆವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ್ ಎಸ್. ತಂಗಡಗಿ, ಇಕ್ಬಾಲ್ ಅನ್ಸಾರಿ ಹಾಗೂ ದೊಡ್ಡನಗೌಡ ಪಾಟೀಲ್ ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ ಉಪಾಧ್ಯಕ್ಷೆ ಲಕ್ಷಮ್ಮ ಎಸ್. ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ ಖಾದ್ರಿ ಪಾಲ್ಗೊಳ್ಳುವರು.
    ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಂಗಮೇಶ ಉಪಾಸೆ ರವರು ದಲಿತ ವಚನಕಾರರ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
Post a Comment