Friday, 17 March 2017

ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಮಾ. 21 ರಂದು ಪೂರ್ವಸಿದ್ಧತಾ ಸಭೆ


ಕೊಪ್ಪಳ ಮಾ. 17 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆಸುವ ಸಂಬಂಧ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆ ಮಾ. 21 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
     ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ವಹಿಸುವರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ಯಾಮಸುಂದರ್ ತಿಳಿಸಿದ್ದಾರೆ.
Post a Comment