Monday, 13 March 2017

ಬಸ್‍ಪಾಸ್‍ನಲ್ಲಿ ಬೇರೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಪಿಯುಸಿ ವಿದ್ಯಾರ್ಥಿಗಳಿಗೆ ಅವಕಾಶ


ಕೊಪ್ಪಳ ಮಾ. 13 (ಕರ್ನಾಟಕ ವಾರ್ತೆ): ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ರಿಯಾಯಿತಿ ಬಸ್ ಪಾಸ್ ಪಡೆದಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು, ಅದೇ ಬಸ್‍ಪಾಸ್ ಬಳಸಿ ಬೇರೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ಸಲುವಾಗಿ ಬಸ್‍ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
     ರಿಯಾಯಿತಿ ಬಸ್‍ಪಾಸ್ ಪಡೆದಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಅದೇ ಬಸ್‍ಪಾಸ್ ಬಳಸಿ, ಪರೀಕ್ಷೆಗೆ ಹಾಜರಾಗಲು, ನಿಗದಿಪಡಿಸಿರುವ ಬೇರೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ.  ಇದಕ್ಕೆ ಸಂಬಂಧಿಸಿದಂತೆ ಈಗಾಗಲೆ ವಿಭಾಗದ ಎಲ್ಲ ಚಾಲಕ, ನಿರ್ವಾಹಕ ಹಾಗೂ ಸಂಬಂಧಿಸಿದ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಬೋರಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment