Wednesday, 15 March 2017

ಟೇಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಮಾ. 15 (ಕರ್ನಾಟಕ ವಾರ್ತೆ): ಕೊಪ್ಪಳದ ಸ್ಟೇಟ್ ಬ್ಯಾಂಕ್ ಆಪ್ ಹೈದ್ರಾಬಾದ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಯುವತಿಯರಿಗೆ 30 ದಿನಗಳ ಅವಧಿಯ ಉಚಿತ ಟೇಲರಿಂಗ್ ತರಬೇತಿ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
     ತರಬೇತಿಗೆ ಆಯ್ಕೆಯಾದವರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು.  ಅರ್ಜಿ ಸಲ್ಲಿಸಲು ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು.  ಕನಿಷ್ಟ 08 ನೇ ತರಗತಿ ಪಾಸ್ ಆಗಿರಬೇಕು.  ಕೊಪ್ಪಳ ಜಿಲ್ಲೆಯವರಾಗಿರಬೇಕು.  ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.  ಅರ್ಜಿ ಸಲ್ಲಿಸಲು ಮಾ. 29 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಿದವರಿಗೆ ಮಾ. 30 ರಂದು ಬೆಳಿಗ್ಗೆ 10-30 ಗಂಟೆಗೆ ಸಂದರ್ಶನ ನಡೆಸಲಾಗುವುದು.  ಮಾ. 31 ರಿಂದ ತರಬೇತಿ ಪ್ರಾರಂಭವಾಗಲಿದೆ.  ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಹೈದ್ರಾಬಾದ್, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ, ದೂರವಾಣಿ ಸಂ: 08539-231038 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Post a Comment