Friday, 17 March 2017

ಪ.ಜಾ. ಅಥವಾ ಪ.ಪಂ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಕೊಪ್ಪಳ, ಮಾ.17 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾಗಿದ್ದು, ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
    ಅರ್ಜಿ ಸಲ್ಲಿಸಲು ದ್ವೀತಿಯ ಪಿ.ಯು.ಸಿ, ಡಿಪ್ಲೋಮಾ(3 ವರ್ಷ), ಬಿಇಡಿ, ಸ್ನಾತಕೋತ್ತರ, ಕೃಷಿ, ಇಂಜೀನಿಯರಿಂಗ್, ಮೆಡಿಸಿನ್, ಅಥವಾ ಪಶುಸಂಗೋಪನೆ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ಇಲಾಖಾ ವೆಬ್‍ಸೈಟ್  www.sw.kar.nic.in ನಲ್ಲಿ ಮಾ.20 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.  ಹಾಗೂ ಆನ್‍ಲೈನ್‍ನಲ್ಲಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಛೇರಿಗೆ ಮಾ.25 ರಂದು ಮುದ್ದಾಂ ಸಲ್ಲಿಸತಕ್ಕದ್ದು.  ಆನ್‍ಲೈನ್‍ನಲ್ಲಿ ಸೀಕೃತವಾದ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಕೊಪ್ಪಳ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯಲ್ಲಿ ಮಂಡಿಸಿ ಬಹುಮಾನ ಹಣವನ್ನು ಮಂಜೂರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment