Wednesday, 15 March 2017

ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ (ಬಿ.ಆರ್.ಸಿ) ಹುದ್ದೆ : ಅರ್ಜಿ ಆಹ್ವಾನ

ಕೊಪ್ಪಳ, ಮಾ.15 (ಕರ್ನಾಟಕ ವಾರ್ತೆ): ಕೊಪ್ಪಳ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಸರ್ವ ಶಿಕ್ಷಣ ಅಭಿಯಾನ ಇವರ ವತಿಯಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿನ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ (ಬಿ.ಆರ್.ಸಿ) ಹುದ್ದೆಗಳನ್ನು ಲಿಖಿತ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
    2017-18ನೇ ಸಾಲಿಗೆ ಜಿಲ್ಲೆಯಲ್ಲಿ ಖಾಲಿ ಇರುವ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ (ಬಿ.ಆರ್.ಸಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಯ ಅಥವಾ “ಬಿ” ವೃಂದದ ಹುದ್ದೆಯಲ್ಲಿರಬೇಕು.  ಅಭ್ಯರ್ಥಿಗಳು ಕನಿಷ್ಠ 3 ವರ್ಷ ಸೇವೆಯನ್ನು ದಿ.31-03-2017ಕ್ಕೆ ಪೂರ್ಣಗೊಳಿಸಿದ ಮತ್ತು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ 2- ವರ್ಷಗಳ ಸೇವೆ ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು.  ಅರ್ಜಿಯನ್ನು ಮಾ.16ರ ಸಂಜೆ 5.30 ರ ಒಳಗಾಗಿ ಆಯಾ ತಾಲೂಕಿನ ಕೇತ್ರ ಶಿಕ್ಷಣಾಧಿಕಾರಿ ಅಥವಾ ಸಕ್ಷಮ ಮೇಲಾಧಿಕಾರಿಗಳಿಗೆ ಸಲ್ಲಿಸಲು ಅವಕಾಶವಿರುತ್ತದೆ.
    ಹೆಚ್ಚಿನ ಮಾಹಿತಿಗಾಗಿ  www.schooleducation.kar.nic.in ಅಥವಾ   www.ssakarnataka.gov.in  ವೆಬ್‍ಸೈಟ್‍ನ್ನು ನೋಡಬಹುದು ಎಂದು ಕೊಪ್ಪಳ ಸರ್ವ ಶಿಕ್ಷಣ ಅಭಿಯಾನ, ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಎ. ಶ್ಯಾಮಸುಂದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment