Wednesday, 13 September 2017

ಜಿಲ್ಲಾ ಪಂಚಾಯತಿ ಕೆಡಿಪಿ ಸಭೆ ಸೆ. 18 ಕ್ಕೆ ಮುಂದೂಡಿಕೆ


ಕೊಪ್ಪಳ ಸೆ. 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತಿ ಸಭೆ ಸೆ. 18 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
     ಜಿ.ಪಂ. ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಸೆ. 14 ರಂದು ನಡೆಸಲು ನಿರ್ಧರಿಸಲಾಗಿತ್ತು.  ಇದೀಗ ಅನಿವಾರ್ಯ ಕಾರಣಗಳಿಗಾಗಿ ಮುಂದೂಡಿ, ಸೆ. 18 ರಂದು ಬೆಳಿಗ್ಗೆ 10 ಗಂಟೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.  ಸಭೆಯ ಅಧ್ಯಕ್ಷತೆಯನ್ನು ಜಿ.ಪಂ. ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ ಅವರು ವಹಿಸುವರು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ತಿಳಿಸಿದ್ದಾರೆ.
Post a Comment