Wednesday, 13 September 2017

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ


ಕೊಪ್ಪಳ ಸೆ. 13 (ಕರ್ನಾಟಕ ವಾರ್ತೆ): ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆ, ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
     ಅರ್ಜಿ ಸಲ್ಲಿಸಲು ಸೆ. 20 ಕೊನೆಯ ದಿನಾಂಕವಾಗಿದ್ದು, ಅರ್ಜಿಯನ್ನು ಆನ್‍ಲೈನ್ ಮೂಲಕ  karepass.cgg.gov.in  ಹಾಗೂ  www.bacwardclasses.kar.nic.in ನಲ್ಲಿ ಸಲ್ಲಿಸಬೇಕು.  ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ ನಲ್ಲಿ ನೋಡಬಹುದು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-65970005/ 65970006 ಅಥವಾ 08539-225900 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment