Monday, 18 September 2017

ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನ : ಅರ್ಜಿ ಆಹ್ವಾನ


ಕೊಪ್ಪಳ ಸೆ. 18 (ಕರ್ನಾಟಕ ವಾರ್ತೆ): ಬಾಗಲಕೋಟ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಶಿಷ್ಯವೇತನವನ್ನು ವೃತ್ತಿಪರ ಪದವಿ ತರಗತಿಯಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳಿಗೆ ಮಂಜೂರು ಮಾಡಲು ಆನ್‍ಲೈನ್ ಮೂಲಕ ಆರ್ಜಿ ಆಹ್ವಾನಿಸಲಾಗಿದೆ. 
    ಪ್ರಧಾನ ಮಂತ್ರಿಗಳ ಶಿಷ್ಯವೇತನವನ್ನು ವೃತ್ತಿಪರ ಪದವಿ ತರಗತಿಯಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ಬಾಗಲಕೋಟ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ನೆಲೆಸಿರುವ ಮಾಜಿ ಸೈನಿಕರ ಮಕ್ಕಳಿಗೆ ಮಂಜೂರು ಮಾಡುವ ಬಗ್ಗೆ ಕೇಂದ್ರೀಯ ಸೈನಿಕ ಬೋರ್ಡನಿಂದ ಸುತ್ತೋಲೆ ಹೊರಡಿಸಿದ್ದು, ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್. 31 ಕೊನೆಯ ದಿನಾಂಕವಾಗಿದ್ದು, ಅದರ ವಿವರ ಪಡೆಯಲು ಸಂಬಂಧಪಟ್ಟ ಮಾಜಿ ಸೈನಿಕರ ಮಕ್ಕಳು ವೆಬ್‍ಸೈಟ್  www.ksb.gov.in  ನಲ್ಲಿ ಸಂಪರ್ಕಿಸಬಹುದು ಎಂದು ಬಾಗಲಕೋಟ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment