Sunday, 17 September 2017

ಸಹಕಾರ ಸಚಿವ ರಮೇಶ ಜಾರಕಿಹೊಳಿ ಅವರ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಸೆ. 17 (ಕರ್ನಾಟಕ ವಾರ್ತೆ): ರಾಜ್ಯ ಸಹಕಾರ ಸಚಿವರಾದ ರಮೇಶ ಜಾರಕಿಹೊಳಿ ಅವರು ಸೆ. 18 ರಂದು ಕೊಪ್ಪಳ ಜಿಲ್ಲೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ರಮೇಶ ಜಾರಕಿಹೊಳಿ ಅವರು ಸೆ. 18 ರಂದು ಸಂಜೆ 04 ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸಲಿದ್ದು, ‘ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ’ ಅವರ ಪುತ್ಥಳಿ ಲೋಕಾರ್ಪಣೆಯ ಕುರಿತು ನಗರದ ಮಹಾಂತಯ್ಯನಮಠ ಕಲ್ಯಾಣ ಮಂಟಪದಲ್ಲಿ ಜರುಗುವ ಪೂರ್ವ ಸಿದ್ಧತೆ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ತಿಳಿಸಿದ್ದಾರೆ.
Post a Comment