Sunday, 17 September 2017

ವಿ.ಎಸ್. ಉಗ್ರಪ್ಪ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಸೆ. 17 (ಕರ್ನಾಟಕ ವಾರ್ತೆ): ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ವಿ.ಎಸ್. ಉಗ್ರಪ್ಪ ಅವರು ಸೆ. 18 ರಂದು ಕೊಪ್ಪಳ ಜಿಲ್ಲೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ವಿ.ಎಸ್. ಉಗ್ರಪ್ಪ ಅವರು ಸೆ. 18 ರಂದು ಸಂಜೆ 04 ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸಲಿದ್ದು, ‘ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ’ ಅವರ ಪುತ್ಥಳಿ ಲೋಕಾರ್ಪಣೆಯ ಕುರಿತು ನಗರದ ಮಹಾಂತಯ್ಯನಮಠ ಕಲ್ಯಾಣ ಮಂಟಪದಲ್ಲಿ ಜರುಗುವ ಪೂರ್ವ ಸಿದ್ಧತೆ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ತಿಳಿಸಿದ್ದಾರೆ.
Post a Comment