Wednesday, 14 February 2018

ಉಚಿತ ಕಂಪ್ಯೂಟರ್ ತರಬೇತಿ : ಹೆಸರು ನೋಂದಣಿಗೆ ಸೂಚನೆ


ಕೊಪ್ಪಳ ಫೆ. 14 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ 30 ದಿನಗಳ ಕಾಲ ಉಚಿತ ಬೇಸಿಕ್ ಕಂಪ್ಯೂಟರ್ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
    ಉಚಿತ ಬೇಸಿಕ್ ಕಂಪ್ಯೂಟರ್ ತರಬೇತಿಯನ್ನು ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಫೆ. 19 ರಿಂದ 30 ದಿನಗಳ ಕಾಲ ಕಛೇರಿ ವೇಳೆಯಲ್ಲಿ ನೀಡಲಾಗುವುದು.  ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯುಳ್ಳ ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ಅಂಕಪಟ್ಟಿ, ವರ್ಗಾವಣೆ ಪತ್ರದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಮತ್ತು ಇತ್ತೀಚಿನ ನಾಲ್ಕು ಭಾವಚಿತ್ರಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು.  ತರಬೇತಿಯು ಉಚಿತವಾಗಿದ್ದು ಯಾವುದೇ ಪ್ರಯಾಣಭತ್ಯೆ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದಿಲ್ಲ. 
    ಆಸಕ್ತ ಅಭ್ಯರ್ಥಿಗಳು ಉಚಿತ ಬೇಸಿಕ್ ಕಂಪ್ಯೂಟರ್ ತರಬೇತಿಯಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೊಪ್ಪಳ ಇವರನ್ನು ಖದ್ದಾಗಿ ಅಥವಾ ದೂರವಾಣಿ ಸಂಖ್ಯೆ 08539-220859, ಮೊ.ಸಂ 7259281875 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Post a Comment