Wednesday, 7 February 2018

ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ಪ್ರಕಾಶಕರ ನೋಂದಣಿಗಾಗಿ ಅರ್ಜಿ ಆಹ್ವಾನ


ಕೊಪ್ಪಳ ಫೆ. 07 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪುಸ್ತಕಗಳ ಬಗ್ಗೆ ಸಾರ್ವಜನಿಕರಲ್ಲಿ ಆಸಕ್ತಿಯನ್ನು, ಓದುವ ಮನೋಭಾವವನ್ನು ಮೂಡಿಸುವ ಸಂಬಂಧವಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡು ಅನುಷ್ಠಾನಕ್ಕೆ ತರುತ್ತಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ಎಲ್ಲಾ ಪ್ರಕಾಶಕರ ನೋಂದಣಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
    ರಾಜ್ಯದಲ್ಲಿ ನೂರಾರು ಪ್ರಕಾಶಕರು ಇದ್ದು, ದಿನವಹಿ ಹತ್ತಾರು ಪುಸ್ತಕಗಳ ಪ್ರಕಟಣೆಯಾಗುತ್ತಿದೆ. ರಾಜ್ಯದಲ್ಲಿ ಪ್ರಕಟಿತ ಪುಸ್ತಕಗಳ ಹಾಗೂ ಪುಸ್ತಕ ಪ್ರಕಾಶಕರ ವಿವರಗಳು ಒಂದೆಡೆ ಲಭ್ಯವಾದಲ್ಲಿ  ಸಾಹಿತ್ಯಾಸಕ್ತರಿಗೆ ಅನುಕೂಲವಾಗುವ ದೃಷ್ಟಿಕೋನದಿಂದ ಕನ್ನಡ ಪುಸ್ತಕ ಪ್ರಾಧಿಕಾರವು ಪ್ರಕಾಶಕರ ನೋಂದಣಿ ಯೋಜನೆಯೊಂದನ್ನು ಆರಂಭಿಸುತ್ತಿದೆ. ಈ ದಿಸೆಯಲ್ಲಿ ರಾಜ್ಯದೆಲ್ಲೆಡೆಯಲ್ಲಿರುವ ಪ್ರಕಾಶಕರು ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ಹೆಸರು ನೊಂದಾಯಿಸಿ ಕೊಳ್ಳಬಹುದಾಗಿದೆ. 
    ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೆಶಕರು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಯನ್ನು ಅಥವಾ ಪ್ರಾಧಿಕಾರದ ವೆಬ್‍ಸೈಟ್  www.kannadapusthakapradhikara.com  ನಲ್ಲಿ ಪಡೆಯಬಹುದಾಗಿದೆ.  ಅರ್ಜಿಯನ್ನು  ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು ದೂ.ಸಂ : 080- 22017704/ 22484516 ಇವರಿಗೆ ಫೆ. 20 ರೊಳಗಾಗಿ ಕಳುಹಿಸಿ ಕೊಡಬೇಕು ಎಂದು ಪ್ರಕಟಣೆ ತಿಳಿಸಿದೆ. 
Post a Comment