Wednesday, 14 February 2018

ದೋಟಿಹಾಳ ಗ್ರಾಮದಲ್ಲಿ ಜಾತ್ರೆ : ಮಧ್ಯಪಾನ ಮಾರಾಟ ನಿಷೇದಾಜ್ಞೆ ಜಾರಿ


ಕೊಪ್ಪಳ ಫೆ. 14 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ನಡೆಯುವ ಅವಧೂತ ಶುಕಮುನಿಸ್ವಾಮಿ ಜಾತ್ರಾ ಮಹೋತ್ಸವದ ನಿಮಿತ್ಯ ಫೆ. 15 ರಂದು ಮದ್ಯಪಾನ, ಮಧ್ಯ ಮಾರಾಟ ನಿಷೇದಾಜ್ಞೆ ಜಾರಿಗೊಳಿಸಿ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಅವರು ಆದೇಶ ಹೊರಡಿಸಿದ್ದಾರೆ.
    ದೋಟಿಹಾಳ ಗ್ರಾಮದಲ್ಲಿ ನಡೆಯುವ ಅವಧೂತ ಶುಕಮುನಿಸ್ವಾಮಿ ಜಾತ್ರಾ ಮಹೋತ್ಸವದ ನಿಮಿತ್ಯ ಯಾವುದೇ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಮಧ್ಯಪಾನ, ಮಧ್ಯ ಮಾರಾಟ ನಿಷೇಧಿಸಲಾಗಿದ್ದು, ಫೆ. 15 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ದೋಟಿಹಾಳ ಸುತ್ತ-ಮುತ್ತ ಗ್ರಾಮಗಳಲ್ಲಿ ಎಲ್ಲಾ ವೈನ್‍ಶಾಪ್, ಬಾರ್ ಗಳು, ಸಗಟು ಮತ್ತು ಚಿಲ್ಲರೆ ಮಧ್ಯ ಮಾರಾಟ ನಿಷೇಧಿಸಿ, ಅಪರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
     ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ಮುಖಂಡತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು, ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು   ಆದೇಶದಲ್ಲಿ ತಿಳಿಸಿದ್ದಾರೆ.
Post a Comment