Thursday, 1 February 2018

ದ್ರಾಕ್ಷಿ ಮತ್ತು ದಾಳಿಂಬೆ ಮೇಳ ದಿನಾಂಕ ಮುಂದೂಡಿಕೆ : ಹೆಸರು ನೋಂದಣಿಗೆ ರೈತರಿಗೆ ಸೂಚನೆ


ಕೊಪ್ಪಳ ಫೆ. 01 (ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆಯು ಕೊಪ್ಪಳದಲ್ಲಿ ಫೆ. 09 ರಿಂದ ಆಯೋಜಿಸಲು ಉದ್ದೇಶಿಸಿದ್ದ ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಯ ತಾಂತ್ರಿಕ ಕಾರ್ಯಗಾರ ಮತ್ತು ಮಾರಾಟ ಮೇಳವನ್ನು ಮುಂದೂಡಲಾಗಿದ್ದು, ಫೆ. 18 ರಿಂದ 22 ರವರೆಗೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.  ಈ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಾರರು ತಮ್ಮ ಹೆಸರು ನೊಂದಾಯಿಸುವಂತೆ ಸೂಚನೆ ನೀಡಲಾಗಿದೆ.
ಫೆ. 09 ರಿಂದ  13 ರವರೆಗೆ ಜಿಲ್ಲೆಯಲ್ಲಿ ದ್ರಾಕ್ಷಿ ಮತ್ತು ದಾಳಿಂಬೆ ತಾಂತ್ರಿಕ ಕಾರ್ಯಾಗಾರ ಮತ್ತು ಮಾರಾಟ ಮೇಳ ಆಯೋಜಿಸಲು ಈ ಮೊದಲು ಉದ್ದೇಶಿಸಲಾಗಿತ್ತು.  ಆದರೆ ಜಿಲ್ಲೆಯ ದಾಳಿಂಬೆ ಮತ್ತು ದ್ರಾಕ್ಷಿಯ ಪ್ರಗತಿಪರ ರೈತರೊಂದಿಗೆ ನಡೆಸಲಾದ ಪೂರ್ವಭಾವಿ ಸಭೆಯಲ್ಲಿ, ಮೇಳ ಹಾಗೂ ಕಾರ್ಯಗಾರದ ದಿನಾಂಕವನ್ನು ಮುಂದೂಡಲು ನಿರ್ಧರಿಸಿದ ಹಿನ್ನೆಲೆಯಲ್ಲಿ, ದ್ರಾಕ್ಷಿ ಮತ್ತು ದಾಳಿಂಬೆ ತಾಂತ್ರಿಕ ಕಾರ್ಯಾಗಾರ ಮತ್ತು ಮಾರಾಟ ಮೇಳವನ್ನು ಫೆ. 18 ರಿಂದ 22 ರವರೆಗೆ ಆಯೋಜಿಸಲು ದಿನಾಂಕ ನಿಗದಿಪಡಿಸಲಾಗಿದೆ. 
       ಜಿಲ್ಲೆಯ ಆಸಕ್ತ ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಾರರು ಮಾರಾಟ ಮೇಳದಲ್ಲಿ ಭಾಗವಹಿಸಲು ಇಚ್ಚಿಸಿದಲ್ಲಿ ಕೂಡಲೆ ಆಯಾ ತಾಲ್ಲೂಕಿನ ತೋಟಗಾರಿಕೆ ಕಛೇರಿಗೆ ಭೇಟಿ ನೀಡಿ ತಮ್ಮ ಹೆಸರು ನೊಂದಾಯಿಸಿಕೊಳ್ಳಬೇಕು. ಅಲ್ಲದೆ, ಜಿಲ್ಲೆಯ ತೋಟಗಾರಿಕೆ ಬೆಳೆಗಾರರು, ತಾಂತ್ರಿಕ ಕಾರ್ಯಾಗಾರದಲ್ಲಿ ಪಾಲ್ಗೊಂಡು ತಾಂತ್ರಿಕ ವಿಷಯವನ್ನು ಪಡೆದುಕೊಳ್ಳಲು ಉತ್ತಮ ಅವಕಾಶವನ್ನು ತೋಟಗಾರಿಕೆ ಇಲಾಖೆ ಕಲ್ಪಿಸಿದೆ.  ಜೊತೆಗೆ ಜಿಲ್ಲೆಯ ಗ್ರಾಹಕರು ಮತ್ತು ಸಾರ್ವಜನಿಕರು ಈ ಮೇಳದಲ್ಲಿ ಪಾಲ್ಗೊಂಡು ಗುಣಮಟ್ಟದ ವಿವಿಧ ತಳಿಗಳ ದ್ರಾಕ್ಷಿ ಮತ್ತು ದಾಳಿಂಬೆ ಹಣ್ಣು ಮತ್ತು ಉತ್ಪನ್ನಗಳನ್ನು ಯೋಗ್ಯ ಬೆಲೆಯಲ್ಲಿ ಖರೀದಿಸಿ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
Post a Comment