Wednesday, 7 February 2018

ನಿರುದ್ಯೋಗಿ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ : ನೊಂದಾಯಿಸಿಕೊಳ್ಳಲು ಸೂಚನೆ


ಕೊಪ್ಪಳ ಫೆ. 07 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಷ್ಟ ವರ್ಗದ ನಿರುದ್ಯೋಗಿ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ವಿವರಗಳನ್ನು ವೆಬ್‍ಸೈಟ್ ಮೂಲಕ ನೊಂದಾಯಿಸಿಕೊಳ್ಳುವಂತೆ ಇಲಾಖೆ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ.
    ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಿ ಉದ್ಯೋಗ ಕಲ್ಪಿಸಲು ಉದ್ದೇಶಿಸಿದೆ.  ತರಬೇತಿಯನ್ನು ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಪಂಗಡದ ಯುವಕ/ ಯುವತಿಯರು ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ವೆಬ್‍ಸೈಟ್  www.stskillakar.in  ನಲ್ಲಿ ತಮ್ಮ ವಿವರಗಳನ್ನು ಫೆ. 21 ರೊಳಗಾಗಿ ನೊಂದಾಯಿಸಿಕೊಳ್ಳಬೇಕು.  ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಅಥವಾ ಸಹಾಯವಾಣಿ 9972494764 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Post a Comment